ADVERTISEMENT

ಕಾರ್ಮಿಕರೆಂದು ಪರಿಗಣಿಸಲು ಸರ್ಕಾರಕ್ಕೆ ಆಗ್ರಹ

ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ; ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಲಪಡಿಸಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2018, 7:18 IST
Last Updated 18 ಜನವರಿ 2018, 7:18 IST
ಬೆಳಗಾವಿಯಲ್ಲಿ ಬುಧವಾರ ನಡೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ನಾಗೇಶ ಸಾತೇರಿ ಮಾತನಾಡಿದರು
ಬೆಳಗಾವಿಯಲ್ಲಿ ಬುಧವಾರ ನಡೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ನಾಗೇಶ ಸಾತೇರಿ ಮಾತನಾಡಿದರು   

ಬೆಳಗಾವಿ: ತಮ್ಮನ್ನು ಕಾರ್ಮಿಕರೆಂದು ಪರಿಗಣಿಸಿ, ₹ 18ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಯೋಜನೆ ಕಾರ್ಯಕರ್ತೆಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘ ಹಾಗೂ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ, ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸ ಲಾಯಿತು. ದೇಶದಾದ್ಯಂತ ಕರೆ ನೀಡಿದ್ದ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನಮ್ಮನ್ನು ದುಡಿಸಿಕೊಳ್ಳಲಾಗುತ್ತಿದೆ. ಆದರೆ, ಗೌರವಧನ ಕಡಿಮೆ ಇದೆ. ಇದರಿಂದ ಜೀವನ ನಿರ್ವಹಣೆ ಕಷ್ಟ
ವಾಗಿದೆ. ಹೀಗಾಗಿ, ಕನಿಷ್ಠ ವೇತನ ನೀಡಬೇಕು. ₹ 3,000 ಪಿಂಚಣಿಯೊಂದಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದರು. ಭಾರತ ಕಾರ್ಮಿಕ ಸಮ್ಮೇಳನದಲ್ಲಿ ಮಾಡಿರುವ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಲಪಡಿಸಬೇಕು ಎಂದರು.

ADVERTISEMENT

‘ಶಿಫಾರಸುಗಳ ಜಾರಿ ವಿಷಯದಲ್ಲಿ ಯುಪಿಎ ಕೂಡ ನಿರ್ಲಕ್ಷ್ಯ ವಹಿಸಿತ್ತು. ಇಂದಿನ ಬಿಜೆಪಿ ಸರ್ಕಾರವೂ ಕ್ರಮ ಕೈಗೊಂಡಿಲ್ಲ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಈ ಯೋಜನೆಗಳಿಗೆ ಅನುದಾನ ಕಡಿಮೆ ಮಾಡುತ್ತಿದೆ. ಜನೋಪಯೋಗಿಯಾದ ಈ ಯೋಜನೆಗಳನ್ನು ಬಲಪಡಿಸುತ್ತಿಲ್ಲ’ ಎಂದು ದೂರಿದರು.

‘ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನಿಗದಿಪಡಿಸಬೇಕು. ಅಗತ್ಯ ಸೌಲಭ್ಯ ಕಲ್ಪಿಸಬೇಕು. ಬಲಹೀನ ಗೊಳಿಸುವ ಹುನ್ನಾರವನ್ನು ನಡೆಸಬಾ ರದು. ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಯೋಜನೆ ಜಾರಿಗೊಳಿಸುವುದು, ರದ್ದುಪಡಿಸುವುದು ಅಥವಾ ಖಾಸಗಿಗೆ ವಹಿಸುವ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬಾರದು’ ಎಂದರು.

ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ, ಗೀತಾ ಬೆಳಗಾವಿ, ಸುಜಾತಾ ಕಾಡಮಠ, ಭಾರತಿ ಮಾಶಾಳ, ಲತಾ ಜಾಧವ, ಶೋಭಾ ಸವದತ್ತಿ, ರೂಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.