ADVERTISEMENT

‘ಅಂಗವೈಕಲ್ಯ ಮುನ್ನೆಚ್ಚರಿಕೆ ಅಗತ್ಯ’

​ಪ್ರಜಾವಾಣಿ ವಾರ್ತೆ
Published 29 ಜನವರಿ 2018, 9:13 IST
Last Updated 29 ಜನವರಿ 2018, 9:13 IST

ಹುಕ್ಕೇರಿ: ಕೆಲ ಕೊಳೆಗೇರಿ ಅಥವಾ ಹಿಂದುಳಿದ ಪ್ರದೇಶಗಳಲ್ಲಿನ ಮಕ್ಕಳಿಗೆ ಶಾಶ್ವತ ಅಂಗವಿಕಲತೆ ಬರಬಾರದು ಎಂಬ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜಿಸುತ್ತಿರುವುದು ಸಂತಸ ಎಂದು ಅಮ್ಮಣಗಿ ಜಿಲ್ಲಾ ಪಂಚಾಯ್ತಿ ಸದಸ್ಯ ನಿಖಿಲ ಕತ್ತಿ ಹೇಳಿದರು.

ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಬೆಲ್ಲದ ಬಾಗೇವಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ದೀಪಕ ಮುರಗಾಲಿ, ವಿಶ್ವರಾಜ ಶುಗರ್ಸ್ ಖರೀದಿ ವಿಭಾಗದ ವ್ಯವಸ್ಥಾಪಕ ಸಿದ್ದು ಬಾನಿ ಇದ್ದರು.

ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಸ್ತೂರಿ ತಿಪ್ಪಾಗೋಳ ಉದ್ಘಾಟಿಸಿದರು. ಪಿ.ಎಲ್. ಜಾಧವ, ಕಿರಿಯ ಆರೋಗ್ಯ ಸಹಾಯಕಿ ಭಾರತಿ ಕಟ್ಟಿಮನಿ ಈ ವೇಳೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.