ADVERTISEMENT

6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿಟಿಯು

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2021, 11:19 IST
Last Updated 20 ಆಗಸ್ಟ್ 2021, 11:19 IST

ಬೆಳಗಾವಿ: ‘ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಪಡಿಸಲಾಗಿದ್ದು, ಅವು 2021-22ನೇ ಸಾಲಿನಿಂದ ಮುಚ್ಚಲಿವೆ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತಿಳಿಸಿದೆ.

ಈ ಬಗ್ಗೆ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಬೆಂಗಳೂರಿನ ಆಲ್ಫಾ ಎಂಜಿನಿಯರಿಂಗ್ ಕಾಲೇಜು, ಬೆಳಗಾವಿಯ ಶೇಖ್ ಎಂಜಿನಿಯರಿಂಗ್ ಕಾಲೇಜು, ಬೆಂಗಳೂರಿನ ಇಸ್ಲಾಮಿಯಾ ತಾಂತ್ರಿಕ ಸಂಸ್ಥೆ, ಚಾಮರಾಜನಗರದ ಏಕಲವ್ಯ ತಾಂತ್ರಿಕ ಸಂಸ್ಥೆ, ಕೆಜಿಎಫ್‌ನ ವಿನಾಯಕ ತಾಂತ್ರಿಕ ಸಂಸ್ಥೆ ಮತ್ತು ಬೆಂಗಳೂರಿನ ಬಿಟಿಎಲ್ ತಾಂತ್ರಿಕ ಸಂಸ್ಥೆಯ ಮಾನ್ಯತೆಯನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದೆ.

ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾನ್ಯತೆ ಪಡೆದ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು. ಯಾರಾದರೂ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಶ್ವವಿದ್ಯಾಲಯವು ಜವಾಬ್ದಾರಿ ಆಗಿರುವುದಿಲ್ಲ ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.