ADVERTISEMENT

6 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ: ಶಾಸಕ ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 13:51 IST
Last Updated 8 ಜುಲೈ 2021, 13:51 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಗೋಕಾಕ (ಬೆಳಗಾವಿ ಜಿಲ್ಲೆ): ಗೋಕಾಕ ಶೈಕ್ಷಣಿಕ ವಲಯಕ್ಕೆ ಆರು ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ (1 ಮತ್ತು 2ನೇ ತರಗತಿ) ಆರಂಭಕ್ಕೆ ಮಂಜೂರಾತಿ ದೊರೆತಿದೆ.

ಕೊಣ್ಣೂರ (ಉರ್ದು), ಗೋಕಾಕದ ಹಿರಿಯ ಉರ್ದು ಪ್ರಾಥಮಿಕ ಸರ್ಕಾರಿ ಶಾಲೆ ನಂ.1, ಮಮದಾಪೂರ ಮತ್ತು ಕನ್ನಡ ಪ್ರಾಥಮಿಕ ಗಂಡು ಮಕ್ಕಳ ಹಾಗೂ ಹೆಣ್ಣು ಮಕ್ಕಳ ಶಾಲೆ, ಹಿರೇನಂದಿ ಮತ್ತು ಕೊಳವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭವಾಗಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

‘ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ ಸರ್ಕಾರದಿಂದಲೇ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ನಡೆಸಲಾಗುತ್ತಿದೆ. ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಲಾಗುವುದು. ಆ ಶಾಲೆಗಳ ಅಭಿವೃದ್ಧಿಗೆ ವೈಯಕ್ತಿಕವಾಗಿಯೂ ಸಹಕಾರ ನೀಡುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

‘ಇಂಗ್ಲಿಷ್ ಕಲಿಕೆ ಕುರಿತು ಆಯಾ ಶಾಲೆಗಳ ಶಿಕ್ಷಕರೊಬ್ಬರಿಗೆ ತರಬೇತಿ ನೀಡಲಾಗುತ್ತಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುವ ಎಲ್ಲಾ ಕೌಶಲಗಳನ್ನು ಅವರಿಗೆ ಕೊಡಲಾಗುವುದು. ಜುಲೈ 10ರಿಂದ ಎಲ್ಲಾ ಕಡೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಅದ್ಧೂರಿಯಾಗಿ ನಡೆಯಲಿದೆ’ ಎಂದು ಬಿಇಒ ಜಿ.ಬಿ. ಬಳಗಾರ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.