ADVERTISEMENT

ಕೋವಿಡ್‌-19: 6 ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 13:32 IST
Last Updated 14 ಜೂನ್ 2020, 13:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಕೋವಿಡ್–19 ಸೋಂಕು ದೃಢಪಟ್ಟು ಇಲ್ಲಿನ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಭಾನುವಾರ ಬಿಡುಗಡೆ ಮಾಡಲಾಯಿತು.

ರೋಗಿ ಸಂಖ್ಯೆಗಳಾದ 5416, 3673, 3680, 3676, 3687 ಹಾಗೂ 4567 ಬಿಡುಗಡೆ ಆದವರು. ಇವರೆಲ್ಲರೂ ಹುಕ್ಕೇರಿ ತಾಲ್ಲೂಕಿನವರು ಎಂದು ಬಿಮ್ಸ್‌ ತಿಳಿಸಿದೆ.

ಜಿಲ್ಲೆಯಲ್ಲಿ ಭಾನುವಾರ ಮತ್ತೊಬ್ಬರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 298ಕ್ಕೆ ಏರಿಕೆಯಾಗಿದೆ.

ADVERTISEMENT

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರೋಗಿ ಸಂಖ್ಯೆ 6825 ಆಗಿರುವ 35 ವರ್ಷದ ವ್ಯಕ್ತಿ ಮಹಾರಾಷ್ಟ್ರದಿಂದ ವಾಪಸ್ ಆದವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.