ADVERTISEMENT

ಅಥಣಿ: ಬಣಜವಾಡ ಕಾಲೇಜಿನ 62 ವಿದ್ಯಾರ್ಥಿಗಳಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 12:04 IST
Last Updated 15 ಜನವರಿ 2022, 12:04 IST

ಅಥಣಿ (ಬೆಳಗಾವಿ ಜಿಲ್ಲೆ): ‘ಪಟ್ಟಣದ ಎಲ್.ಎನ್. ಬಣಜವಾಡ ವಸತಿ ಪಿಯು ಕಾಲೇಜಿನ 62 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಆ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದು ಟಿಎಚ್‌ಒ ಬಸವರಾಜ ಕಾಗೆ ತಿಳಿಸಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ‘ಅಲ್ಲಿದ್ದ 200 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಸೋಂಕಿತರಲ್ಲಿ 18 ಮಂದಿ ಪಟ್ಟಣದವರು. ಉಳಿದವರು ತಾಲ್ಲೂಕಿನ ಬೇರೆ ಬೇರೆ ಗ್ರಾಮದವರಾಗಿದ್ದಾರೆ. ವಿದ್ಯಾರ್ಥಿಗಳು ಮನೆಗಳಲ್ಲಿ ಪ್ರತ್ಯೇಕ ವಾಸದಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು.

‘ಅಥಣಿ ಹಾಗೂ ಕಾಗವಾಡ ತಾಲ್ಲೂಕಿನ ಪ್ರತಿ ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆ (ರ‍್ಯಾಂಡಮ್‌ ಟೆಸ್ಟ್) ಮಾಡಲಾಗುತ್ತಿದೆ. ವರದಿಗಳು ಹಂತ ಹಂತವಾಗಿ ಬರುತ್ತಿವೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.