ADVERTISEMENT

7 ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 16:11 IST
Last Updated 2 ಜೂನ್ 2020, 16:11 IST

ಬೆಳಗಾವಿ: ಕೋವಿಡ್–19 ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ 7 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಇಲ್ಲಿನ ಬಿಮ್ಸ್‌ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ.

‘ಅಥಣಿ ತಾಲ್ಲೂಕಿನ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು (ರೋಗಿ ಸಂಖ್ಯೆಗಳಾದ 2260, 2261, 2262, 2263, 2264, 2266 ಮತ್ತು 2268) ಬಿಡುಗಡೆ ಆದವರು’ ಎಂದು ಬಿಮ್ಸ್‌ ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ಗಿರೀಶ ದಂಡಗಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT