ADVERTISEMENT

ರಷ್ಯಾ-ಉಕ್ರೇನ್ ಸಂಘರ್ಷ: ತಾಯ್ನಾಡು ತಲುಪಿದ ಮತ್ತೇಳು ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 13:07 IST
Last Updated 7 ಮಾರ್ಚ್ 2022, 13:07 IST
ಯುದ್ಧಪೀಡಿತ ಉಕ್ರೇನ್‌ನಿಂದ ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣಕ್ಕೆ ಸೋಮವಾರ ಬಂದ ವಿದ್ಯಾರ್ಥಿಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬರಮಾಡಿಕೊಂಡರು
ಯುದ್ಧಪೀಡಿತ ಉಕ್ರೇನ್‌ನಿಂದ ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣಕ್ಕೆ ಸೋಮವಾರ ಬಂದ ವಿದ್ಯಾರ್ಥಿಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬರಮಾಡಿಕೊಂಡರು   

ಬೆಳಗಾವಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ಜಿಲ್ಲೆಯ ಮತ್ತೇಳು ವೈದ್ಯಕೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತವರು ತಲುಪಿದ್ದಾರೆ.

ಸರ್ಕಾರದ ನೆರವಿನಿಂದ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣಕ್ಕೆ ಸೋಮವಾರ ಬಂದಿಳಿದ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ ಬೆನಕೆ, ವಿಧಾನಪರಿಷತ್ ಸದಸ್ಯ ಲಖನ್‌ ಜಾರಕಿಹೊಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮತ್ತು ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್‌ಕುಮಾರ್‌ ಮೌರ್ಯ ಹೂಗುಚ್ಛ ನೀಡಿ ಬರಮಾಡಿಕೊಂಡರು.

ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಅವಳಿ ಸಹೋದರಿಯರಾದ ಪ್ರಿಯಾ ಛಬ್ಬಿ ಮತ್ತು ಪ್ರೀತಿ ಛಬ್ಬಿ, ಅಥಣಿ ತಾಲ್ಲೂಕಿನ ಸಹೋದರರಾದ ರಾಕೇಶ್ ಪೂಜರಿ ಮತ್ತು ನಾಗೇಶ್ ಪೂಜಾರಿ, ರಾಯಬಾಗ ತಾಲ್ಲೂಕು ಕಂಕಣವಾಡಿಯ ಪ್ರಿಯಾ ನಿಡಗುಂದಿ, ಬೆಳಗಾವಿಯ ಶ್ರೇಯಾ ಹೇರೇಕಲ್, ಘಟಪ್ರಭಾದ ಅಮೋಘಾ ಚೌಗಲಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪೋಷಕರು ಮಕ್ಕಳನ್ನು ಕಂಡು ನಿಟ್ಟುಸಿರು ಬಿಟ್ಟರು. ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಸಹಕರಿಸಿದ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸಿದರು.

ADVERTISEMENT

‘ಜಿಲ್ಲೆಯ 20 ವಿದ್ಯಾರ್ಥಿಗಳ ಪೈಕಿ 17 ಮಂದಿ ಅವರವರ ಊರು ತಲುಪಿದಂತಾಗಿದೆ. ಉಳಿದ ಮೂವರು ಕೂಡ ಶೀಘ್ರದಲ್ಲೇ ಬಂದು ತಲುಪಲಿದ್ದಾರೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.