ಬೆಳಗಾವಿ: ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ವಿವಿಧೆಡೆ 129 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ₹ 61.01 ಲಕ್ಷ ಮೌಲ್ಯದ 786.67 ಕೆ.ಜಿ. ಗಾಂಜಾವನ್ನು ನಾಶಪಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
‘ಜೂನ್ 26ರಂದು ಬೆಳಿಗ್ಗೆ 10ಕ್ಕೆ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೂಗೊಪ್ಪದ ಗ್ರೀನ್ ಮ್ಯಾನೇಜ್‌ಮೆಂಟ್ ಪ್ರೈ.ಲಿ. ಕಾರ್ಖಾನೆಯ ಸ್ಥಳದಲ್ಲಿ ನಿಯಮಾನುಸಾರ ನಾಶಪಡಿಸಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಬೆಳೆಯುತ್ತಿದ್ದ, ಸಾಗಣೆ ಮಾಡುತ್ತಿದ್ದ ಹಾಗೂ ಮಾರುತ್ತಿದ್ದವರ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದ ಗಾಂಜಾ ಇದಾಗಿದೆ. ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಜಿಲ್ಲಾ ಮಾದಕ ದ್ರವ್ಯ ವಿಲೇವಾರಿ ಸಮಿತಿಯಿಂದ ಅನುಮತಿ ಪಡೆದು ನಾಶಪಡಿಸಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.