ADVERTISEMENT

905 ಮನೆಗಳ ನಿರ್ಮಾಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 14:10 IST
Last Updated 29 ಜನವರಿ 2022, 14:10 IST
ಬೆಳಗಾವಿಯ ರುಕ್ಮಿಣಿ ನಗರದಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ ಸಂಸದೆ ಮಂಗಲಾ ಅಂಗಡಿ ಚಾಲನೆ ನೀಡಿದರು. ಶಾಸಕ ಅನಿಲ ಬೆನಕೆ ಇದ್ದಾರೆ
ಬೆಳಗಾವಿಯ ರುಕ್ಮಿಣಿ ನಗರದಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ ಸಂಸದೆ ಮಂಗಲಾ ಅಂಗಡಿ ಚಾಲನೆ ನೀಡಿದರು. ಶಾಸಕ ಅನಿಲ ಬೆನಕೆ ಇದ್ದಾರೆ   

ಬೆಳಗಾವಿ: ‘2023–24ರ ಹೊತ್ತಿಗೆ ಎಲ್ಲರಿಗೂ ಮನೆ ಸಿಗಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಏಕಕಾಲದಲ್ಲಿ 905 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ತಿಳಿಸಿದರು.

ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಕ್ಷೇತ್ರದಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

‘ಅಲಾರವಾಡ ಪ್ರದೇಶಕ್ಕೆ 1,600 ಮನೆಗಳು ಮಂಜೂರಾಗಿವೆ. ನಿರ್ಮಾಣ ಸಮಯದಲ್ಲಿ ಏನೇ ತಕರಾರು ಇದ್ದರೂ ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು’ ಎಂದು ಹೇಳಿದರು.

ADVERTISEMENT

ಸಂಸದೆ ಮಂಗಲಾ ಅಂಗಡಿ ಚಾಲನೆ ನೀಡಿದರು.

ನಗರಪಾಲಿಕೆ ಸದಸ್ಯ ರಾಜಶೇಖರ ಡೋಣಿ, ಮುಖಂಡರಾದ ಬಸವರಾಜ ಅಂಚಿ, ಶಿರಗುಪ್ಪಿ ಶೆಟ್ಟರ, ಮಹಾದೇವ ರಾಠೋಡ, ಹಣಮಂತ ಕಾಗಲಕರ, ಗಣೇಶ ಧೆಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.