ಬೆಳಗಾವಿ: ತಾಲ್ಲೂಕಿನ ಕರ್ಲೆ ಬಳಿ ಸೋಮವಾರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕೆಲವರು ತಡೆದು, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.
ಕರ್ಲೆಯ ಮೋಹನ ತಳವಾರ(55) ಮೃತರು. ‘ಗ್ರಾಮ ಪಂಚಾಯ್ತಿಗೆ ಕೆಲಸವೊಂದಕ್ಕೆ ಮೋಹನ ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ, ಕರ್ಲೆ–ಬಾದರವಾಡಿ ರಸ್ತೆಯಲ್ಲಿ ಅಪರಿಚಿತರು ತಡೆದು ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದರು.
‘ಆರೋಪಿಗಳ ಪತ್ತೆಗಾಗಿ ಎಲ್ಲ ಆಯಾಮಗಳಿಂದ ತನಿಖೆ ಆರಂಭಿಸಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.