ADVERTISEMENT

ಬೆಳಗಾವಿ | ಬಸ್‌ನಿಂದ ಇಳಿಯುವಾಗ ಬಿದ್ದ ವಿದ್ಯಾರ್ಥಿನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 13:57 IST
Last Updated 27 ನವೆಂಬರ್ 2023, 13:57 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಳಗಾವಿ: ಚಲಿಸುತ್ತಿದ್ದ ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕೋಡಿಯ ಅಂಬೇಡ್ಕರ್ ವೃತ್ತದ ಬಳಿ ಚಿಕ್ಕೋಡಿ–ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ರಾಯಬಾಗ ತಾಲ್ಲೂಕಿನ ನಂದಿಕುರಳಿಯ ಸಂಜನಾ ದತ್ತವಾಡೆ (17) ಗಾಯಗೊಂಡವರು. ರಾಯಬಾಗದಿಂದ ಚಿಕ್ಕೋಡಿಗೆ ಬರುತ್ತಿದ್ದ ಬಸ್‌ನಿಂದ ಇಳಿಯುವಾಗ ಅವರು ಬಿದ್ದಿದ್ದು, ತಲೆಗೆ ಪೆಟ್ಟಾಗಿದೆ. ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.