ADVERTISEMENT

ಸೂಪರಿಂಟೆಂಡೆಂಟ್ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 11:02 IST
Last Updated 11 ಆಗಸ್ಟ್ 2021, 11:02 IST
   

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೃಷ್ಣಕುಮಾರ್‌ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬೆಂಗಳೂರಿನ ಅಧಿಕಾರಿಗಳ ತಂಡ ಬುಧವಾರ ದಾಳಿ ನಡೆಸಿ, ಮಾಹಿತಿ ಕಲೆ ಹಾಕಿತು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ್ದ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಕಾರಾಗೃಹದ ಪಕ್ಕದಲ್ಲಿರುವ ಸರ್ಕಾರಿ ನಿವಾಸದ ಮೇಲೆ ಐವರು ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಇಲ್ಲಿನ ಎಸಿಬಿ ಅಧಿಕಾರಿಗಳು ನೆರವು ನೀಡಿದರು.

ADVERTISEMENT

ಕೃಷ್ಣಕುಮಾರ್‌ ಅವರು ಇಲ್ಲಿಗೆ ಬರುವುದಕ್ಕೆ ಮುನ್ನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ, ಎಸಿಬಿಯವರು ಅವರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿ ತೆರಳಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.