ಅಥಣಿ: ‘ಕಾಶ್ಮೀರದ ಪಹಾಲ್ಗಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಯಿಂದ ಭಾರತಕ್ಕೆ ಅಷ್ಟೇ ಅಲ್ಲ, ವಿಶ್ವಕ್ಕೇ ಆಘಾತವಾಗಿದೆ. ಭಯೋತ್ಪಾದನೆ ಮನುಕುಲಕ್ಕೆ ಮಾರಕ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಧಾರ ತೆಗೆದುಕೊಳ್ಳುವ ಮೂಲಕ ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕಬೇಕು’ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಅಥಣಿ ಘಟಕದ ಅಧ್ಯಕ್ಷ ರಾವಸಾಬ ಅಂಬಿ ಅಗ್ರಹಿಸಿದರು.
ಉಗ್ರರ ದಾಳಿ ಖಂಡಿಸಿ ಪಟ್ಟಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ನಗರ ಸಂಚಾಲಕ ಸುದೀಪ ನಾಯಿಕ ಮಾತನಾಡಿದರು. ವಿದ್ಯಾರ್ಥಿಗಳು ಪಟ್ಟಣದ ಮುರುಘೇಂದ್ರ ಶಿವಯೋಗಿ ಪದವಿ ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ನಂತರ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರ ಕಾರ್ಯದರ್ಶಿ ಗೋಪಾಲ್ ಕಾಂಬಳೆ, ಪರಶುರಾಮ ಭಂಗಿ, ಪ್ರಭು ಪಾಟೀಲ, ಶ್ರೀಶೈಲ್ ದೇವರೆಡ್ಡಿ, ರಸೂಲ ಮುಲ್ಲಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.