
ಪ್ರಜಾವಾಣಿ ವಾರ್ತೆ(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ರಾಮದುರ್ಗ: ಪದಮಂಡಿ ಗ್ರಾಮದ ಹತ್ತಿರ ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಈಚೆಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಮೃತ ಯುವಕನನ್ನು ಸವದತ್ತಿ ತಾಲ್ಲೂಕಿನ ಇಂಚಲ ಗ್ರಾಮದ ಶಿವು ಮಲ್ಲಯ್ಯ ಜಕ್ಕಪ್ಪನವರ(22) ಎಂದು ಗುರುತಿಸಲಾಗಿದೆ. ಕಟಕೋಳ ಕಡೆಯಿಂದ ಮುನವಳ್ಳಿಗೆ ಕಡೆಗೆ ಹೋಗುತ್ತಿದ್ದ ಸವಾರ ಶಿವು ಕಟಕೊಳ ಕಡೆಯಿಂದ ಮುನವಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿ ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ಗೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ಬಸವರಾಜ ಕೊಣ್ಣೂರೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.