ನಿಪ್ಪಾಣಿ: ಇಲ್ಲಿನ ಮಹಾತ್ಮ ಗಾಂಧಿ ಆಸ್ಪತ್ರೆ ಎದುರಿಗೆ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಎರಡು ಬೈಕ್‍ಗಳು ಓವರ್ ಟೇಕ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವನ್ನಪ್ಪಿದ್ದು, ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿಪ್ಪಾಣಿ ನಗರಸಭೆಯ ಮಾಜಿ ನಗರಾಧ್ಯಕ್ಷ ಗಜೇಂದ್ರ ಪೋಳ ಪುತ್ರ ಹರ್ಷವರ್ಧನ(19) ಹಾಗೂ ದರ್ಗಾ ಗಲ್ಲಿಯ ಆಯಾನ ಗುಲ್ಜಾರ್(23) ಮೃತರು. ಗಾಯಾಳು ಸುಮಿತ್ ಎಂಬುವವರನ್ನು ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.