ನಾಗರಮುನ್ನೋಳಿ: ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಈಚೆಗೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಇಲ್ಲಿನ ನಿವಾಸಿ ವಸಂತ ನಾಗರಾಳೆ (40) ಶುಕ್ರವಾರ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು.
‘ಬೈಕ್‌ನಲ್ಲಿ ಚಲಿಸುತ್ತಿದ್ದಾಗ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ವಸಂತ ನಾಗರಾಳೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕೋಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.