ಹಿರೇಬಾಗೇವಾಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಕಮಕಾರಟ್ಟಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಕಮಕಾರಟ್ಟಿ ಗ್ರಾಮದ ಭುಜಂಗ ಪಕ್ಕೀರ ಕಾಮನ್ನವರ (60) ಮೃತಪಟ್ಟವರು. ದಕ್ಷಿಣ ಆಫ್ರಿಕಾ ಪ್ರಜೆ ಧಾರವಾಡ ಕಡೆಯಿಂದ ಬೆಳಗಾವಿಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದ್ದಾರೆ ಎಂದು ಹಿರೇಬಾಗೇವಾಡಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.