ADVERTISEMENT

ಉದ್ಯೋಗ ಸೃಷ್ಟಿಗೆ ಕ್ರಮ: ಅಂಗಡಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 15:03 IST
Last Updated 28 ಜುಲೈ 2019, 15:03 IST
ಬೆಳಗಾವಿಯ ರಾಮತೀರ್ಥ ನಗರದಲ್ಲಿ ಭಾನುವಾರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಸಿ ನೆಟ್ಟರು. ಶಾಸಕ ಅನಿಲ ಬೆನಕೆ ಇದ್ದಾರೆ
ಬೆಳಗಾವಿಯ ರಾಮತೀರ್ಥ ನಗರದಲ್ಲಿ ಭಾನುವಾರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಸಿ ನೆಟ್ಟರು. ಶಾಸಕ ಅನಿಲ ಬೆನಕೆ ಇದ್ದಾರೆ   

ಬೆಳಗಾವಿ: ‘ರೈಲ್ವೆ ಇಲಾಖೆ ದೇಶದ ಅತಿದೊಡ್ಡ ಉದ್ಯೋಗ ವಲಯವಾಗಿದ್ದು, ಇಲಾಖೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ರಾಮತೀರ್ಥ ನಗರ ರಹವಾಸಿಗಳ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಯುವಕರು ನೇಮಕಾತಿಗಾಗಿ ಅಗತ್ಯ ತಯಾರಿ ಮಾಡಿಕೊಳ್ಳಬೇಕು’ ಎಂದರು.

‘ಬೆಳಗಾವಿ–ಗೋವಾ ಹಾಗೂ ಬೆಳಗಾವಿ–ಪುಣೆ ರೈಲು ಆರಂಭಿಸುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ನಗರದ ರೈಲು ನಿಲ್ದಾಣದ ಉನ್ನತೀಕರಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ನಂತರ ಸಚಿವರು ಪೌರ ಕಾರ್ಮಿಕರನ್ನು ಸನ್ಮಾನಿಸಿದರು ಹಾಗೂರಸ್ತೆ ಬದಿಯಲ್ಲಿ ಸಸಿ ನೆಟ್ಟರು. ಶಾಸಕ ಅನಿಲ ಬೆನಕೆ,ಪಾಲಿಕೆ ಆರೋಗ್ಯಾಧಿಕಾರಿ ಡಾ.ಶಶಿಧರ ನಾಡಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್‌ ಎಂ.ವಿ. ಹಿರೇಮಠ, ಮುಖಂಡರಾದ ಎಂ.ಬಿ. ನಿರ್ವಾಣಿ, ಮುಖ್ತಾರ ಪಠಾಣ, ಸುರೇಶ ಯಾದವ, ಎಚ್.ಎಫ್. ಹುಂಡೇಕಾರ, ವಜ್ರಕಾಂತ ಸಾಲಿಮಠ, ಎಂ.ಎ. ಕೋರಿಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.