ADVERTISEMENT

ಕೃಷಿ ಮಾರಾಟ ಮಳಿಗೆಗೆ ಅಧಿಕಾರಿಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 4 ಮೇ 2020, 11:47 IST
Last Updated 4 ಮೇ 2020, 11:47 IST

ಬೆಳಗಾವಿ: ‘ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಬೇಕಾದ ಗುಣಮಟ್ಟದ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ತರಿಸಿಕೊಂಡು ಸಕಾಲಕ್ಕೆ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದರು.

ನಗರದ ಕಾಕತಿವೇಸ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮೊದಲಾದ ಪರಿಕರ ಮಳಿಗೆಗಳಿಗೆ ಭೇಟಿ ನೀಡಿ ಅವರು ಪರಿಶೀಲಿಸಿದರು.

‘ಕೃಷಿಕರಿಗೆ ಯಾವುದೇ ಪರಿಕರ ಕೊರತೆಯಾಗದಂತೆ ನೋಡಿಕೊಳ್ಳಲು ಇಲಾಖೆ ಕ್ರಮ ಕೈಗೊಂಡಿದೆ. ಮಾರಾಟಗಾರರು ರೈತರಿಗೆ ಸ್ಪಂದಿಸಬೇಕು’ ಎಂದರು.

ADVERTISEMENT

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಜಿ.ಬಿ. ಕಲ್ಯಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.