ADVERTISEMENT

ಪರೀಕ್ಷೆಗೆ ಎಐಡಿಎಸ್‌ಒ ವಿರೋಧ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 15:21 IST
Last Updated 14 ಜುಲೈ 2020, 15:21 IST

ಬೆಳಗಾವಿ: ‘ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿ ವಿರೋಧಿಯಾಗಿದೆ’ ಎಂದು ಎಐಡಿಎಸ್‌ಒ ಜಿಲ್ಲಾ ಸಮಿತಿಯ ಸಂಘಟಕ ಮಹಾಂತೇಶ ಬಿಳೂರ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಈ ಎಲ್ಲ ಪರೀಕ್ಷೆಗಳನ್ನು ಮುಂದೂಡಬೇಕು. ಏಕರೂಪ, ತಾರತಮ್ಯವಿಲ್ಲದ ಮತ್ತು ಉತ್ತಮ ಗುಣಮಟ್ಟದ ಶಿಕ್ಷಣ ಖಾತ್ರಿಪಡಿಸುವ ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಸಿದ್ಧಪಡಿಸಬೇಕು. ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು. ಎಲ್ಲ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಪರೀಕ್ಷಾ ಶುಲ್ಕ ರದ್ದಗೊಳಿಸಬೇಕು. ಈಗಾಗಲೇ ಪಡೆದಿದ್ದಲ್ಲಿ ಹಿಂದಿರುಗಿಸಬೇಕು. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 17ರಂದು ‘ಅಖಿಲ ಕರ್ನಾಟಕ ಪ್ರತಿಭಟನಾ ದಿನ’ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT