ADVERTISEMENT

ಶ್ರೇಯಸ್ಸು ಅಂಬೇಡ್ಕರ್‌ಗೆ ಸಲ್ಲುತ್ತದೆ: ಬಾಲಚಂದ್ರ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 14:41 IST
Last Updated 26 ನವೆಂಬರ್ 2020, 14:41 IST
ಗೋಕಾಕದಲ್ಲಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾವಿ ಮಂಡಲದಿಂದ ಗುರುವಾರ ಆಯೋಜಿಸಿದ್ದ ‘ಸಂವಿಧಾನ ದಿನ’ ಆಚರಣೆ ಕಾರ್ಯಕ್ರಮದಲ್ಲಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು
ಗೋಕಾಕದಲ್ಲಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾವಿ ಮಂಡಲದಿಂದ ಗುರುವಾರ ಆಯೋಜಿಸಿದ್ದ ‘ಸಂವಿಧಾನ ದಿನ’ ಆಚರಣೆ ಕಾರ್ಯಕ್ರಮದಲ್ಲಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು   

ಗೋಕಾಕ: ‘ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಗುರುವಾರ ಬಿಜೆಪಿ ಅರಭಾವಿ ಮಂಡಲದಿಂದ ಹಮ್ಮಿಕೊಂಡಿದ್ದ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಪ್ರತಿ ನಾಗರಿಕರಿಗೂ ಸಮಾನ ಹಕ್ಕನ್ನು ಒದಗಿಸುವ ಪ್ರಮುಖ ಸಾಧನ ಸಂವಿಧಾನ. ಎಲ್ಲ ವರ್ಗಗಳ ಸ್ವಾತಂತ್ರ್ಯ ರಕ್ಷಿಸುತ್ತಿದೆ. ಜಾತಿ, ಮತ, ಪಂಥ, ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ಯಾವುದೇ ತಾರತಮ್ಯ ಮಾಡದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗಬೇಕೆಂಬುದು ಅಂಬೇಡ್ಕರ್‌ ಆಶಯವಾಗಿತ್ತು. ಪ್ರತಿಯೊಬ್ಬರೂ ಅಂಬೇಡ್ಕರ ಅವರನ್ನು ಸ್ಮರಿಸಿ ಅವರಿಗೆ ಗೌರವ ನೀಡಬೇಕು’ ಎಂದರು.

ADVERTISEMENT

‘ನಮಗೆ ಮೊದಲು ದೇಶ ಮುಖ್ಯ. ದೇಶದ ಒಳತಿಗೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಇಡೀ ವಿಶ್ವವೇ ಇಂದು ಭಾರತದತ್ತ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರು ಹಮ್ಮಿಕೊಂಡ ಪ್ರಗತಿಪರ ಕಾರ್ಯಗಳೇ ಕಾರಣವಾಗಿವೆ’ ಎಂದು ತಿಳಿಸಿದರು.

ಉಪನ್ಯಾಸಕ ವಿಠ್ಠಲ ಕನೀಲ್ದಾರ ಸಂವಿಧಾನದ ಬಗ್ಗೆ ಮಾತನಾಡಿದರು.

ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ರೈತ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಪದಾಧಿಕಾರಿಗಳಾದ ನಾಗಪ್ಪ ಕುದರಿ, ಯಲ್ಲಾಲಿಂಗ ವಾಳದ, ತಮ್ಮಣ್ಣ ದೇವರ, ಇಕ್ಬಾಲ್ ಸರ್ಕಾರ್‌ವಸ್, ಸಂಗಪ್ಪ ಕಂಠಿಕಾರ ಇದ್ದರು.

ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ ಸ್ವಾಗತಿಸಿದರು. ಮಹಾಂತೇಶ ಕುಡಚಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.