ಚನ್ನಮ್ಮನ ಕಿತ್ತೂರು: ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಜಯಂತ್ಯುತ್ಸವ ಅಂಗವಾಗಿ ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಅವರ ಭಾವಚಿತ್ರಗಳ ಮೆರವಣಿಗೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಕಲ್ಮಠದ ಶಂಕರ ಚಂದರಗಿ ಸಭಾಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ‘ಬಾಬಾಸಾಹೇಬರ ಕನಸಿನಂತೆ ಎಲ್ಲರೂ ಶಿಕ್ಷಣವಂತರಾಗಬೇಕು. ಇಬ್ಬರು ಮಹಾನ್ ನಾಯಕರ ಆದರ್ಶ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು’ ಎಂದು ಕರೆ ನೀಡಿದರು.
ಪ್ರೊ.ಮಹಾಂತೇಶ ಕಾಳೆ ಉಪನ್ಯಾಸ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇದೇ ವೇಳೆ ಸತ್ಕರಿಸಲಾಯಿತು.
ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈಸಿದ್ದರಾಮ ಮಾರಿಹಾಳ, ಸದಸ್ಯರು, ತಹಶೀಲ್ದಾರ್ ರವೀಂದ್ರ ಹಾದಿಮನಿ, ಸಿಪಿಐ ಶಿವಾನಂದ ಗುಡಗನಟ್ಟಿ, ಬಿಇಒ ಚನಬಸಪ್ಪ ತುಬಾಕದ, ಮುಖಂಡರಾದ ಭೀಮಸಿ ದುರ್ಗಣ್ಣವರ, ರಾಜು ಜಾಂಗಟಿ, ಫಕ್ಕೀರಪ್ಪ ಜಾಂಗಟಿ, ಮಡಿವಾಳೆಪ್ಪ ವಕ್ಕುಂದ, ಬಸವರಾಜ ಕೆಳಗಡೆ, ಗುರುಸಿದ್ದಪ್ಪ ಜಾಂಗಟಿ, ಸಮಾಜದ ಗಣ್ಯರು,ಅಧಿಕಾರಿಗಳು, ಮಹಿಳೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.