ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮನ ವೃತ್ತ ಬಳಿಯ ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಸೋಮವಾರ ಸಂಭ್ರಮದಿಂದ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಂಸದರಾದ ಜಗದೀಶ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಆಸಿಫ್ ಸೇಠ್, ಮೇಯರ್ ಮಂಗೇಶ್ ಪವಾರ, ಉಪಮೇಯರ್ ವಾಣಿ ಜೋಶಿ ಅವರು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.