ADVERTISEMENT

ವೈಚಾರಿಕ ಚಿಂತನೆ ಬಿತ್ತಿದ ಮೊದಲ ಶರಣ: ಡಾ.ವೈ.ಎಂ. ಯಾಕೊಳ್ಳಿ

ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 13:52 IST
Last Updated 21 ಜನವರಿ 2021, 13:52 IST
ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉದ್ಘಾಟಿಸಿದರು
ಬೆಳಗಾವಿಯಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉದ್ಘಾಟಿಸಿದರು   

ಬೆಳಗಾವಿ: ‘ಸಮಾಜದ ತಪ್ಪು ತಿದ್ದುವಲ್ಲಿ ಶಿಕ್ಷಕನ ಪಾತ್ರ ನಿರ್ವಹಿಸಿ, ಬದಲಾವಣೆಯಲ್ಲಿ ವಚನಗಳ ಮೂಲಕ ನೇರವಾಗಿ ವೈಚಾರಿಕ ಚಿಂತನೆ ಬೆಳೆಸಿದ ಮೊದಲ ಶರಣ ಅಂಬಿಗರ ಚೌಡಯ್ಯ’ ಎಂದು ಯಕ್ಕುಂಡಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ವೈ.ಎಂ. ಯಾಕೊಳ್ಳಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಚನ ಸಾಹಿತ್ಯದ ಶರಣರಲ್ಲಿ ಚೌಡಯ್ಯನವರು ವಿಶೇಷ ಶರಣರು. ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಬಹಳ ಕಟುವಾಗಿ ಟೀಕಿಸಿದರು. ವೈಚಾರಿಕ ಚಿಂತನೆ ಬೆಳಸುವ ಜೊತೆಗೆ ಅವರು ಸಮಾಜದ ತಪ್ಪುಗಳನ್ನು ತಮ್ಮ ವಚನ ಸಾಹಿತ್ಯದ ಮೂಲಕ ನೇರವಾಗಿ ವಿರೋಧಿದರು’ ಎಂದು ಹೇಳಿದರು.

ADVERTISEMENT

ಜ್ಯೋತಿ ಬಸವರಾಜ ಕುರೇರ ಮತ್ತು ತಂಡದದವರು ವಚನ ಸಂಗೀತ ಪ್ರಸ್ತುತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಫೋಟೊ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾಜದ ಮುಖಂಡರಾದ ಮಧುಶ್ರೀ ಪೂಜೇರಿ, ರಮೇಶ ಗಸ್ತಿ, ರವಿಶಂಕರ ಚನಾಳ, ಎಸ್.ಕೆ. ಗುಸ್ರೆ, ಗೂಳಪ್ಪ ಉದಯನ್ನವರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.