ADVERTISEMENT

ಅತ್ಯಾಧುನಿಕ ಆಂಬುಲೆನ್ಸ್‌ ಸೇವೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 14:21 IST
Last Updated 10 ಆಗಸ್ಟ್ 2019, 14:21 IST
ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಒದಗಿಸಿರುವ ಆಂಬುಲೆನ್ಸ್‌ ಸೇವೆಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಚಾಲನೆ ನೀಡಿದರು
ಬೆಳಗಾವಿ ಜಿಲ್ಲಾಸ್ಪತ್ರೆಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಒದಗಿಸಿರುವ ಆಂಬುಲೆನ್ಸ್‌ ಸೇವೆಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಚಾಲನೆ ನೀಡಿದರು   

ಬೆಳಗಾವಿ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಇಲ್ಲಿನ ಜಿಲ್ಲಾಸ್ಪತ್ರೆಗೆ ಒದಗಿಸಿರುವ ಅತ್ಯಾಧುನಿಕ ಸೌಲಭ್ಯಗಳುಳ್ಳ ಆಂಬುಲೆನ್ಸ್‌ ಸೇವೆಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಶನಿವಾರ ಚಾಲನೆ ನೀಡಿದರು.

ಇದೇ ವೇಳೆ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳು, ಮಾಡ್ಯುಲರ್‌ ಆಪರೇಷನ್‌ ಥಿಯೇಟರ್‌, ಐಸಿಯು ನಿರ್ಮಾಣಕ್ಕೆ ಮಂಜೂರಾತಿ ನೀಡಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಬಿಮ್ಸ್‌ ನಿರ್ದೇಶಕ ಡಾ.ಎಸ್‌.ಟಿ. ಕಳಸದ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.