ADVERTISEMENT

ಶಾ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 12:53 IST
Last Updated 13 ಜನವರಿ 2021, 12:53 IST
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ ಜನಸೇವಕ ಸಮಾವೇಶ ಸಮಾರೋಪಕ್ಕೆ ನಡೆದಿರುವ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬುಧವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯ ಜನಸೇವಕ ಸಮಾವೇಶ ಸಮಾರೋಪಕ್ಕೆ ನಡೆದಿರುವ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬುಧವಾರ ವೀಕ್ಷಿಸಿದರುಪ್ರಜಾವಾಣಿ ಚಿತ್ರ   

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 17ರಂದು ಬಿಜೆಪಿಯಿಂದ ಹಮ್ಮಿಕೊಂಡಿರುವ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ನಡೆದಿರುವ ವೇದಿಕೆ ನಿರ್ಮಾಣ ಮೊದಲಾದ ಸಿದ್ಧತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬುಧವಾರ ವೀಕ್ಷಿಸಿದರು.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಯಕರೆಲ್ಲರೂ ಭಾಗವಹಿಸಲಿದ್ದಾರೆ. 3 ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಸೇರಿಸಲಾಗುವುದು. ಪಕ್ಷದ ಎಲ್ಲ ಮುಖಂಡರು ಹಾಗೂ ಜನಪ್ರತಿನಿಧಿಗಳು ಸೇರಿ ಸಮಾವೇಶದ ಯಶಸ್ಸಿಗೆ ಶ್ರಮಿಸುತ್ತಿದ್ದೇವೆ’ ಎಂದು ಹೇಳಿದರು.

ಶಾಸಕ ಮಹೇಶ ಕುಮಠಳ್ಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟೀಮನಿ, ಇನ್‌ಸ್ಪೆಕ್ಟರ್ ಜಾವೇದ್ ಮುಶಾಪುರಿ ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.