ADVERTISEMENT

ಬೆಳಗಾವಿ: ಸುರೇಶ ಅಂಗಡಿ ನಿವಾಸಕ್ಕೆ ಅಮಿತ್ ಶಾ ಭೇಟಿ, ಕುಟುಂಬದವರಿಗೆ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 11:03 IST
Last Updated 17 ಜನವರಿ 2021, 11:03 IST
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿವಂಗತ ಸುರೇಶ ಅಂಗಡಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ, ನಮನ ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿವಂಗತ ಸುರೇಶ ಅಂಗಡಿ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ, ನಮನ ಸಲ್ಲಿಸಿದರು.   

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅಯವರ ನಿವಾಸ ‘ಸ್ಫೂರ್ತಿ’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಭೇಟಿ ನೀಡಿದರು.

ದಿ.ಸುರೇಶ ಅಂಗಡಿ ಅವರ ಫೋಟೊಗೆ ನಮನ ಸಲ್ಲಿಸಿದರು.

ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅವರು ಕೋವಿಡ್ ನಿಂದ ಬಳಲುತ್ತಿರುವಾಗ ನಾನೂ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ .ಅವರ ನಿಧನ ದೊಡ್ಡ ನಷ್ಟ ಉಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ADVERTISEMENT

ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ.ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ.ಅಂಗಡಿ ಅವರಿಗೆ ಸಾಂತ್ವನ ಹೇಳಿ, ದುಃಖ ಸಹಿಸಿಕೊಳ್ಳುವ ಶಕ್ತಿ ಬರಲೆಂದು ಪ್ರಾರ್ಥಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ದಿ‌.ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಚನ್ನಬಸಪ್ಪ ಅಂಗಡಿ ನಾಗೇರಹಾಳದ (ಕೊಂಡಸಕೊಪ್ಪ) ನಿವಾಸದಲ್ಲಿದ್ದರು‌.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್,ರಾಜ್ಯ ಅಧ್ಯಕ್ಷ ನಳೀನಕುಮಾರ್ ಕಟೀಲ, ಬೃಹತ್, ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ , ಶಾಸಕ ಅನಿಲ ಬೆನಕೆ, ಉಪಸ್ಥಿತರಿದ್ದರು.

ಬಿಗಿಭದ್ರತೆ ಕುಟುಂಬ ವರ್ಗದ ಸದಸ್ಯರಿಗೆ ಮಾತ್ರ ಅವಕಾಶ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ತಲುಪುವ ಎಲ್ಲಾ ಮಾರ್ಗಗಳಲ್ಲಿ ಬಿಗಿ ಭದ್ರತೆ ಮಾಡಲಾಗಿತ್ತು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ದಿ.ಸುರೇಶ ಅಂಗಡಿ ಅವರ ಆಪ್ತ ಸಿಬ್ಬಂದಿ ವರ್ಗದ ರಾಜು ಜೋಶಿ, ಶ್ರೀಕಾಂತ ಕಡಕೋಳ, ಸಂತೋಷ ತುಬಚಿ, ಶಿವಲಿಂಗಯ್ಯ ಅಲ್ಲಯ್ಯನವರಮಠ ಸೇರಿದಂತೆ ಕೆಲವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.