ADVERTISEMENT

ಅನಮೋಡ ತನಿಖಾ ಠಾಣೆ: ಬೆಳಗಾವಿಯಲ್ಲಿ ಕಾರ್ಯನಿರ್ವಹಣೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 13:19 IST
Last Updated 23 ಸೆಪ್ಟೆಂಬರ್ 2021, 13:19 IST

ಬೆಳಗಾವಿ: ಸಾರಿಗೆ ಇಲಾಖೆಯ ಅನಮೋಡ ತನಿಖಾ ಠಾಣೆಯನ್ನು ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯ ಆವರಣಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿದೆ.

ಗೋವಾ ರಾಜ್ಯಕ್ಕೆ ಹೊಂದಿಕೊಂಡಂತೆ ರಸ್ತೆ ವಿಸ್ತರಣೆ ಕಾಮಗಾರಿಯು ಪ್ರಾರಂಭಗೊಂಡಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಮನಗರ-ಗೋವಾ ಗಡಿ ರಾಷ್ಟ್ರೀಯ ಹೆದ್ದಾರಿ-4ಎ ಅನ್ನು ಉನ್ನತೀಕರಿಸುವ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಅನಮೋಡ ತನಿಖಾ ಠಾಣೆಯು ಇಲ್ಲಿ ಕಾರ್ಯನಿರ್ವಹಿಸಲಿದೆ. ಪ್ರತ್ಯೇಕ ವಿಭಾಗದಲ್ಲಿ ಸ್ಥಳಾಂತರಿಸಿ, ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಆದ್ದರಿಂದ ಗೋವಾ, ಮಹಾರಾಷ್ಟ್ರ ಹಾಗೂ ಹೊರ ರಾಜ್ಯಗಳಿಂದ ಬರುವ ವಾಹನಗಳಿಗೆ ವಿಶೇಷ ಪರವಾನಗಿ ಪತ್ರ, ತಾತ್ಕಾಲಿಕ ಪರವಾನಗಿ ಪತ್ರ ಹಾಗೂ ತೆರಿಗೆ ಪಾವತಿಸಲು ಸಾರ್ವಜನಿಕರು, ವಾಹನ ಮಾಲೀಕರು ಮತ್ತು ಚಾಲಕರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆವರಣದಲ್ಲಿ ತೆರೆಯಲಾದ ಪ್ರತ್ಯೇಕ ವಿಭಾಗಕ್ಕೆ ಭೇಟಿ ನೀಡಬೇಕು ಎಂದು ಅನಮೋಡ-ರಾಮನಗರ ತನಿಖಾ ಠಾಣೆಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ.ಕಾಳಿಸಿಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.