ADVERTISEMENT

ಅಂಗನವಾಡಿ, ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2025, 15:25 IST
Last Updated 1 ಏಪ್ರಿಲ್ 2025, 15:25 IST
ರಾಮದುರ್ಗ ತಾಲ್ಲೂಕಿನ ಮುದಕವಿ ಗ್ರಾಮದ ಪ್ರೌಢಶಾಲೆಯ ನೂತನ ಕೊಠಡಿಗಳ ನಿರ್ಮಾಣಕ್ಕೆ ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು 
ರಾಮದುರ್ಗ ತಾಲ್ಲೂಕಿನ ಮುದಕವಿ ಗ್ರಾಮದ ಪ್ರೌಢಶಾಲೆಯ ನೂತನ ಕೊಠಡಿಗಳ ನಿರ್ಮಾಣಕ್ಕೆ ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಭೂಮಿ ಪೂಜೆ ನೆರವೇರಿಸಿದರು    

ರಾಮದುರ್ಗ: ರಾಜ್ಯ ಸರ್ಕಾರ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುತ್ತಿದೆ. ಬರುವ ದಿನಗಳಲ್ಲಿ ತಾಲ್ಲೂಕಿನ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಸಭೆಯ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಭಾನುವಾರ ತಾಲ್ಲೂಕಿನ ಮುದಕವಿಯ ಸರ್ಕಾರಿ ಪ್ರೌಢಶಾಲೆಗೆ ಕೇಂದ್ರ ಯೋಜನೆಯಡಿ ₹ 43 ಲಕ್ಷ ವೆಚ್ಚದಲ್ಲಿ ಮಂಜೂರಾದ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಯೋಜನೆಗಳ ಯಶಸ್ವಿಗೆ ಶಿಕ್ಷಕರು ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಿಗೆ ಬಡವರ ಮಕ್ಕಳು ಬರುತ್ತಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಸಾಮಗ್ರಿ ಬಳಕೆ ಮಾಡಿ ಕಟ್ಟಬೇಕು. ಕಳಪೆ ಸಾಮಗ್ರಿ ಬಳಸಿದರೆ ಒಪ್ಪುವುದಿಲ್ಲ. ಅಧಿಕಾರಿಗಳು ಸಮರ್ಪವಾಗಿ ಮೇಲುಸ್ತುವಾರಿ ಮಾಡಬೇಕು ಎಂದು ಹೇಳಿದರು.

ADVERTISEMENT

ಇದೇ ದಿನ ತಾಲ್ಲೂಕಿನ ಮಾರಡಗಿಯಲ್ಲಿ ನರೇಗಾ ಒಗ್ಗೂಡಿಸುವಿಕೆ ಯೋಜನೆಯಡಿ ₹ 20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಕೂಡ ಚಾಲನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ.ಬಳಿಗಾರ, ಸಿಡಿಪಿಒ ಶಂಕರ ಕುಂಬಾರ, ಮುದಕವಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ವಹಿದ್ ಖಾಜಿ, ಶಿವಾನಂದ ಮಠಪತಿ, ಮುರಗೇಶ ಕಂಬನ್ನವರ, ನಜೀರ ಖಾಜಿ, ಮುಖ್ಯ ಶಿಕ್ಷಕ ಎಸ್.ಆರ್. ಪಮ್ಮಾರ, ಗೊಣ್ಣಾಗರ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಉಮೇಶ ಸವದತ್ತಿ, ಶಿವರಾಯಪ್ಪ ಕೇರಿ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.