ADVERTISEMENT

ಬೆಳಗಾವಿ: ಅಂಗನವಾಡಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 12:08 IST
Last Updated 13 ಜುಲೈ 2020, 12:08 IST
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಭದ್ರತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲ್ಲೂಕು ಸಮಿತಿಯವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಲಾಕ್‌ಡೌನ್‌ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿವೆ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು. ಕೋವಿಡ್–19 ನಿಯಂತ್ರಣದ ಕೆಲಸದಲ್ಲಿ ತೊಡಗಿರುವ ಅಂಗನವಾಡಿ ನೌಕರರೆಲ್ಲರಿಗೂ ತಾರತಮ್ಯವಿಲ್ಲದೆ ₹ 50 ಲಕ್ಷ ವಿಮಾ ಸೌಲಭ್ಯ ಒದಗಿಸಬೇಕು. ಈಗಾಗಲೇ ನಿವೃತ್ತರಾಗಿರುವವರಿಗೆ ನಿವೃತ್ತಿ ವೇತನ ಮೊದಲಾದ ಸೌಲಭ್ಯಗಳನ್ನು ಕೂಡಲೇ ಕೊಡಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.