ಸಾವು
ಪ್ರಾತಿನಿಧಿಕ ಚಿತ್ರ
ಖಾನಾಪುರ: ತಾಲ್ಲೂಕಿನ ನಂದಗಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ ಪಾಟೀಲ (50) ಅವರ ಶವ ಭಾನುವಾರ ಬೆಳಗಾವಿ ಗೋವಾ ರಾಷ್ಟ್ರೀಯ ಹೆದ್ದಾರಿಯ ತಿನೈಘಾಟ ಬಳಿ ಸೇತುವೆಯೊಂದರ ಕೆಳಗೆ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ರಾಮನಗರ ಪೊಲೀಸರು ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಅಶ್ವಿನಿ ಅವರ ಶವದ ಮುಖ ಮತ್ತು ತಲೆಯ ಭಾಗದಲ್ಲಿ ಗಾಯದ ಗುರುತುಗಳಿವೆ.
ಅಶ್ವಿನಿ ಅವರು ಅ.2 ರಂದು ನಂದಗಡದಿಂದ ಕಕ್ಕೇರಿ ಜಾತ್ರೆಗೆ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಮನೆಗೆ ಹಿಂತಿರುಗದ ಕಾರಣ ಅವರ ಕುಟುಂಬದ ಸದಸ್ಯರು ನಂದಗಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಭಾನುವಾರ ಪತ್ತೆಯಾದ ಅವರ ಶವದ ಬಳಿ ಅವರ ಮೊಬೈಲ್ ದೊರೆತಿದ್ದು, ಅದರಲ್ಲಿರುವ ಕೆಲವು ಸಂದೇಶಗಳು ಅವರ ಸಾವಿನ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿವೆ. ರಾಮನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.