ADVERTISEMENT

ಎಲ್‌ಕೆಜಿ, ಯುಕೆಜಿ: ಅಂಗನವಾಡಿಯಲ್ಲಿ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 11:46 IST
Last Updated 21 ಸೆಪ್ಟೆಂಬರ್ 2020, 11:46 IST

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಕ್ಕೂಟದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಎಲ್‌ಕೆಜಿ, ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಬೇಕು. ಐಸಿಡಿಎಸ್‌ ಯೋಜನೆಯನ್ನು ಬಲವರ್ಧನೆಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು. ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಬೇಕು. ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವಂತೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

‘ಗ್ರಾಮೀಣ ಪ್ರದೇಶಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹೋದ ವರ್ಷದ ಜುಲೈನ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಸಾತೇರಿ, ಉಪಾಧ್ಯಕ್ಷರಾದ ವೈ.ಬಿ. ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಸುಜಾತಾ ಬೆಳವಾವಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.