
ಮಂಜುನಾಥ ಚವ್ಹಾಣ
ಬೆಳಗಾವಿ: ‘ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳು ಇರುವ ಆವರಣ ಮತ್ತು ಬೇರೆ ಪ್ರಾಣಿಗಳಿರುವ ಆವರಣಗಳಲ್ಲಿ ಸೋಂಕು ಹರಡದಂತೆ ತಡೆಯಲು ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾವನ್ನಪ್ಪಿದ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲು ಬನ್ನೇರುಘಟ್ಟದಿಂದ ಬಂದಿದ್ದ ತಜ್ಞರ ಅಭಿಪ್ರಾಯದ ಪ್ರಕಾರ, ಬ್ಯಾಕ್ಟೀರಿಯಾ ಸೋಂಕಿನಿಂದ ಪ್ರಾಣಿಗಳು ಸಾವನ್ನಪ್ಪಿವೆ ಎಂದು ಶಂಕಿಸಲಾಗಿದೆ. ಈಗ ಬದುಕುಳಿದ ಕೃಷ್ಣಮೃಗಗಳಿಗೂ ಅವರ ಮಾರ್ಗದರ್ಶನದ ಮೇರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮಲ್ಲಿ 7 ಕೃಷ್ಣಮೃಗಗಳು ಜೀವಂತವಾಗಿವೆ. ಅವು ಸಕ್ರಿಯವಾಗಿವೆ. ಆದರೆ, ಅವುಗಳಿಗೂ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಹಾಗಾಗಿ ತಜ್ಞರು ಮತ್ತೆ ಆಗಮಿಸುತ್ತಿದ್ದಾರೆ’ ಎಂದರು.
‘ಮೃಗಾಲಯದಲ್ಲಿ ಕೆಲಸ ಮಾಡುತ್ತಿರುವ ವೈದ್ಯಾಧಿಕಾರಿ ಮತ್ತು ಸಹಾಯಕ ಪಶುವೈದ್ಯ ಕಳೆದ ಮೂರು ವರ್ಷಗಳಿಂದ ಪ್ರಾಣಿಗಳ ಆರೈಕೆ ಮಾಡುತ್ತಿದ್ದಾರೆ. ವಿವಿಧ ಕಾರ್ಯಾಗಾರಗಳಿಗೆ ಅವರು ಹಾಜರಾಗಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೃಷ್ಣಮೃಗಗಳ ಸಾವು ಸಂಭವಿಸಿದೆ. ಗುಜರಾತ್‌ನ ವಡೋದರಾದಲ್ಲಿ ಇಂಥ ಒಂದು ಘಟನೆಯನ್ನು ನಾವು ನೋಡಿದ್ದೇವೆ. ಒಳಾಂಗಗಳ ಮಾದರಿಗಳ ಪರೀಕ್ಷಾ ವರದಿಗಳು ನಿಖರವಾದ ಕಾರಣ ನೀಡಲಿವೆ. ಇದರಿಂದ ಭವಿಷ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ’ ಎಂದು ತಿಳಿಸಿದರು.
ರಾಣಿ ಚನ್ನಮ್ಮ ಕಿರು ಮೃಗಾಲಯ
ರಾಣಿ ಚನ್ನಮ್ಮ ಕಿರು ಮೃಗಾಲಯ
ರಾಣಿ ಚನ್ನಮ್ಮ ಕಿರು ಮೃಗಾಲಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.