ADVERTISEMENT

ಅಂಕಲಗಿ: ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 16:05 IST
Last Updated 10 ಜುಲೈ 2021, 16:05 IST
ಗೋಕಾಕ ತಾಲ್ಲೂಕಿನ ಅಂಕಲಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಚಾಲನೆ ನೀಡಿದರು
ಗೋಕಾಕ ತಾಲ್ಲೂಕಿನ ಅಂಕಲಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಚಾಲನೆ ನೀಡಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ಶಾಸಕ ರಮೇಶ ಜಾರಕಿಹೊಳಿ ಅವರು ತಾಲ್ಲೂಕಿನ ಅಂಕಲಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿದರು.

ಲೋಕೋಪಯೋಗಿ ಇಲಾಖೆಯಿಂದ ₹ 28.85 ಕೋಟಿ ವೆಚ್ಚದಲ್ಲಿ 21 ಕಿ.ಮೀ. ಸಿಸಿ ರಸ್ತೆ ನಿರ್ಮಾಣ, ಡಾಂಬರೀಕರಣ, ಜಲಜೀವನ ಅಭಿಯಾನದಲ್ಲಿ ₹ 80 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ ₹ 30 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಸೇವೆಗೆ ಸಮರ್ಪಿಸಿದರು.

ಮುಖಂಡರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ರಾಮಣ್ಣ ಸುಂಬಳಿ, ಬಸವರಾಜ ಪಟ್ಟಣಶೆಟ್ಟಿ, ಚಂದ್ರಪ್ಪ ಭೂಸಣ್ಣವರ, ಮುನ್ನಾ ಗಣಾಚಾರಿ, ಮಲ್ಲೇಶ ಪಾಶ್ಚಾಪೂರಿ, ಮುನ್ನಾ ದೇಸಾಯಿ, ಬಾಳಗೌಡ ಪಾಟೀಲ, ಹುಸೇನಖಾನ ದೇಸಾಯಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.