
ಪ್ರಜಾವಾಣಿ ವಾರ್ತೆ
ಅರುಣ ಕೋಪರ್ಡೆ
ಬೆಳಗಾವಿ: ಪ್ರಯಾಗ್ ರಾಜ್ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೋರ್ವ ಪುರುಷ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 3ಕ್ಕೆ ಏರಿದೆ.
ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಸಾವನ್ನಪ್ಪಿದವರು.
ಪತ್ನಿ ಜೊತೆಗೆ ಪ್ರಯಾಗ್ ರಾಜ್‌ಗೆ ತೆರಳಿದ್ದರು. ಬುಧವಾರ ಬೆಳಿಗ್ಗೆ ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಅರುಣ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅರುಣ್ ಕೊಪಾರ್ಡೆ ಮನೆಗೆ ಬೆಳಗಾವಿ ತಹಶಿಲ್ದಾರ್ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಖಚಿತ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.