ADVERTISEMENT

ಬೆಳಗಾವಿ | ಮಾನವಶಾಸ್ತ್ರ ಕೋರ್ಸ್‌ ಹಿಂದಕ್ಕೆ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2023, 13:29 IST
Last Updated 13 ನವೆಂಬರ್ 2023, 13:29 IST
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ   

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು 2023–24ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ  ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸುತ್ತಿರುವ ಕುರಿತು ಅಧಿಸೂಚನೆ ಹೊರಡಿಸಿತ್ತು. ನ.20 ಅರ್ಜಿ ಸಲ್ಲಿಕೆಗೆ ಕೊನೇ ದಿನವಾಗಿತ್ತು.

ಆದರೆ, ಅಧಿಸೂಚನೆಯಲ್ಲಿ ಪ್ರಕಟಿಸಿದ್ದ ಮಾನವಶಾಸ್ತ್ರ ಸ್ನಾತಕೋತ್ತರ ಕೋರ್ಸ್‌ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಆರಂಭವಾಗುತ್ತಿಲ್ಲ. ಹಾಗಾಗಿ ಈ ಕೋರ್ಸ್‌ ಅನ್ನು ಅಧಿಸೂಚನೆಯಿಂದ ಹಿಂದಕ್ಕೆ ಪಡೆಯಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವೆ ರಾಜಶ್ರೀ ಜೈನಾಪುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT