ADVERTISEMENT

ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 16:03 IST
Last Updated 31 ಆಗಸ್ಟ್ 2024, 16:03 IST

ರಾಮದುರ್ಗ: ಈ ವರ್ಷದಲ್ಲಿ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹದ ಧನ ಮಂಜೂರು ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ www.sm.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳನ್ನು ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08335–242589ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.