ADVERTISEMENT

ವಸತಿ ಯೋಜನೆ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 13:47 IST
Last Updated 7 ಫೆಬ್ರುವರಿ 2022, 13:47 IST

ಬೆಳಗಾವಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2021–22ನೇ ಸಾಲಿಗೆ ಮನೆ (ವಸತಿ) ನಿರ್ಮಾಣ ಯೋಜನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳು, ವಿಧವೆಯರು, ಒಂಟಿ ಮಹಿಳೆಯರು ಮೊದಲಾದವರಿಗೆ ಮನೆ ನಿರ್ಮಿಸಿಕೊಡಲಾಗುವುದು. ನಿಗಮದ ಜಿಲ್ಲಾ ಕಚೇರಿಯಲ್ಲಿ ಅರ್ಜಿಗಳನ್ನು ಫೆ.25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: ̧0831-2451252 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಾಮನಿರ್ದೇಶಿತ ಸದಸ್ಯರ ಆಯ್ಕೆ

ADVERTISEMENT

ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ನಾಮನಿರ್ದೇಶಿತ ಸದಸ್ಯರನ್ನ ನೇಮಕ ಮಾಡುವುದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಅರೆ ಅಲೆಮಾರಿ ಸೂಕ್ಷ್ಮ, ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಒಬ್ಬ ಮಹಿಳಾ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ಒಬ್ಬರು ಹಾಗೂ ಪರಿಶಿಷ್ಟ ಜಾತಿಗೆ ಮೂವರು ನಾಮ ನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲಾಗುವುದು. ಫೆ.20ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ: 0831-2471191 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಾವು ಬೆಳೆಗೆ ಕೀಟ, ರೋಗ ಬಾಧೆ

ಬೆಳಗಾವಿ: ಜಿಲ್ಲೆಯಲ್ಲಿ ಬಹುತೇಕ ಕಡೆಗೆ ಮಾವು ಫಸಲು ಉತ್ತಮವಾಗಿದ್ದು, ಕೆಲವೆಡೆ ರೋಗ–ಕೀಟ ಬಾಧೆ ಕಂಡುಬಂದಿದೆ.

‘ಮಾವಿನ ತೋಟಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗಿದೆ. ಕೀಟ ಹಾಗೂ ರೋಗ ಬಾಧೆ ನಿವಾರಣೆಗೆ ರೈತರು ಕ್ರಮ ವಹಿಸಬೇಕು’ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಸಲಹೆ ನೀಡಿದ್ದಾರೆ.

‘ಜಿಗಿಹುಳು, ಬೂದಿ ರೋಗ, ಚಿಬ್ಬುರೋಗ ಕಾಣಿಸಿಕೊಂಡರೆ ತಜ್ಞರ ಸಲಹೆಯಂತೆ ಅಜಾಡಿರಾಕ್ಟಿನ್ (ಬೇವಿನ ಎಣ್ಣೆ)ಯನ್ನು 2 ಮಿ.ಲೀ. ನೀರಿನಲ್ಲಿ ಸೇರಿಸಿ ಸಿಂಪಡಿಸಬೇಕು. ಕಾಂಡಕ್ಕೆ ಗೆದ್ದಲು ಹುಳು ಬಾರದಂತೆ ಸಿಒಸಿ ಜೊತೆಗೆ ಕ್ಲೋರೋಫೈರಿಫಾಸ್ ಕೀಟನಾಶಕ ಮಿಶ್ರಣ ಮಾಡಿ ಲೇಪಿಸಬೇಕು. ಕೀಟಗಳ ನಿಯಂತ್ರಣಕ್ಕೆ ಇಮಿಡಾಕ್ಲೋಪ್ರಿಡ್ ಎಸ್.ಎಲ್. 0.50 ಮಿ.ಲೀ. ಅಥವಾ ಲಾಂಬ್ಡಾಸೈಹ್ಯಾಲೋಥ್ರಿನ್ 5.0ಇಸಿ ಅಥವಾ ಬೂಪ್ರೊಪಿನ್ 25 ಇ.ಸಿ. ಅಲ್ಲದೇ ಅಜಾಡಿರ‍್ಯಾಕ್ಟಿನ್ 10000 ಪಿ.ಪಿ.ಎಂ. 2 ಮಿ.ಲೀ. ಕೀಟನಾಶಕಗಳನ್ನು ಬದಲಾಯಿಸಿ ಸಿಂಪಡಿಸುತ್ತಿರಬೇಕು’ ಎಂದು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0831-2407296 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.