ADVERTISEMENT

ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2024, 8:23 IST
Last Updated 31 ಆಗಸ್ಟ್ 2024, 8:23 IST
ಸವದತ್ತಿಯ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಬದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಲಾಯಿತು
ಸವದತ್ತಿಯ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಬದಲ್ಲಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಿಸಲಾಯಿತು   

ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು.

ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ. ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು.

ವೇದಿಕೆಯಲ್ಲಿ 99 ಮಂದಿ ವಿದ್ಯಾರ್ಥಿ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ಹಾಗೂ ಶಿಷ್ಯವೇತನದಲ್ಲಿ ಶಿಕ್ಷಣ ಪಡೆದ 18 ವಿದ್ಯಾರ್ಥಿಗಳಿಗೆ ಪೂಜ್ಯರ ಆಶೀರ್ವಾದ ಪತ್ರ ವಿತರಿಸಲಾಯಿತು.

ADVERTISEMENT

ಜಿಲ್ಲಾ ನಿರ್ದೇಶಕ ಎಚ್.ಆರ್. ಲವಕುಮಾರ, ಸದಾನಂದ ದೀಕ್ಷಿತರು, ಶ್ರೀಧರ ಅಸಂಗಿಹಾಳ, ಕಾವೇರಿ ಮಾಸ್ತಿಹೊಳಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.