
ಪ್ರಜಾವಾಣಿ ವಾರ್ತೆ
ಬೈಲಹೊಂಗಲ: ಪಟ್ಟಣದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ವೇದಮೂರ್ತಿ ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ ಅವರಿಗೆ ಬೆಳಗಾವಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಘಣನೀಯ ಸೇವೆ ಪರಿಗಣಿಸಿ ಜಿಲ್ಲಾ ವಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ರಾಜು ಶೇಟ್, ಜಿಲ್ಲಾಧಿಕಾರಿ ಮಹಮ್ಮದ್ ರೋಶನ್, ಜಿಲ್ಲಾ ಪಂಚಾಯಿತಿ ಸಿಇಒ ಅರುಣ ಸಿಂದೆ, ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರಾಯಗೋಳು, ಇನ್ನೂ ಅನೇಕ ಗಣ್ಯ ವ್ಯಕ್ತಿಗಳು ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.