ಬೆಳಗಾವಿ: ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್ 12 ರಿಂದ 14ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಅಹೋರಾತ್ರಿ ಧರಣಿ ನಡೆಸಲಿದೆ.
‘ಜನವರಿಯಲ್ಲಿ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ಧಾಗ ಗೌರವಧನವನ್ನು ₹ 10 ಸಾವಿರಕ್ಕೆ ಏರಿಸುವುದಾಗಿ ಸರ್ಕಾರ ತಿಳಿಸಿತ್ತು. ಈವರೆಗೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಸಂಘಟನೆ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ನೌಕರರ ಪ್ರೋತ್ಸಾಹಧನ ಹೆಚ್ಚಿಸಿದಂತೆ, ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನವನ್ನೂ ₹ 1 ಸಾವಿರ ಹೆಚ್ಚಿಸಬೇಕು’ ಎಂದರು. ಸಂಘಟನೆಯ ಲಕ್ಷ್ಮಣ ಜಡಗನ್ನವರ, ಗೀತಾ ರಾಯಗೋಳ, ರೂಪಾ ಅಂಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.