
ಬೆಳಗಾವಿ: ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸುರುವ ಅರ್ಜಿಯು 2026ರ ಜನವರಿ 21ರಂದು ವಿಚಾರಣೆಗೆ ಬರಲಿದೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂಜಾಗೃತಾ ಕ್ರಮವಾಗಿ ಗಡಿ ಕನ್ನಡಿಗರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮನವಿ ಮಾಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಗಡಿ ಉಸ್ತುವಾರಿ ಸಚಿವರೂ ಆದ ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿದ ನಿಯೋಗವು ಈ ವಿಚಾರವಾಗಿ ಸುದೀರ್ಘವಾಗಿ ಚರ್ಚಿಸಿತು.
ಚರ್ಚೆಯ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ ಅವರು, ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಗಡಿ ಸಂರಕ್ಷಣಾ ಆಯೋಗದ ಸದಸ್ಯ ಕಾರ್ಯದರ್ಶಿ, ನಿವೃತ್ತ ಜಿಲ್ಲಾ ಪ್ರಧಾನ ನ್ಯಾಯಧೀಶರಾದ ಧರ್ಮೇಗೌಡ ಅವರೊಂದಿಗೂ ಸಚಿವರು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕ್ರಿಯಾ ಸಮಿತಿ ಉಪಾಧ್ಯಕ್ಷ ಮೈನೋದ್ದಿನ ಮಕಾನದಾರ, ಗಡಿನಾಡು ಕನ್ನಡಿಗರ ಸೇನೆಯ ಅಧ್ಯಕ್ಷ ಬಲರಾಮ ಮಾಸೇನಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.