
ರಾಮದುರ್ಗ: ಸರ್ಕಾರ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಅನುದಾನದ ಪ್ರಯೋಜನ ಪಡೆದು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಲು ಗ್ರಾಮೀಣ ಮಕ್ಕಳು ಮುಂದಾಗಬೇಕು ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಶುಕ್ರವಾರ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದಲ್ಲಿ ನಬಾರ್ಡ ಆರ್‍ಐಡಿಎಫ್ ಯೋಜನೆಯಡಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿ, ಉತ್ತಮ ಪ್ರಜೆಗಳ ನಿರ್ಮಾಣ ಮತ್ತು ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅಗತ್ಯ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮವ್ವ ಬಡಕಲಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಆರ್. ಕಾಂಬಳೆ ಪ್ರಾಸ್ತಾವಿಕವಾಗಿ
ಮಾತನಾಡಿದರು.
ಎಸ್‍ಡಿಎಂಸಿ ಅಧ್ಯಕ್ಷ ಭರಮಪ್ಪ ಬೆಳಗಂಟಿ, ಪಂಚಾಯಿತಿ ಉಪಾಧ್ಯಕ್ಷ ಯಲ್ಲಪ್ಪ ಬೆಳಗಂಟಿ, ಸದಸ್ಯೆ ನಾಗವ್ವ ಕಂಬಳಿ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಅವ್ವಪ್ಪ ಅಂಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.