ADVERTISEMENT

ಜಿಲ್ಲಾ ವಿಭಜನೆ ಕುರಿತ ಅಭಿಪ್ರಾಯ ಸಂಗ್ರಹಿಸುವಲ್ಲಿ ವಿಫಲ: ಅಶೋಕ ಪೂಜಾರಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 2:32 IST
Last Updated 28 ಡಿಸೆಂಬರ್ 2025, 2:32 IST
ಅಶೋಕ ಪೂಜಾರಿ
ಅಶೋಕ ಪೂಜಾರಿ   

ಗೋಕಾಕ: ‘ಬೆಳಗಾವಿ ಜಿಲ್ಲಾ ವಿಭಜನೆ ಬಗ್ಗೆ ಆಸಕ್ತಿ ವಹಿಸಿ, ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ವಿಫಲರಾಗಿದ್ದಾರೆ’ ಎಂದು ಮುಖಂಡ ಅಶೋಕ ಪೂಜಾರಿ ದೂರಿದರು.

ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಳಿಗಾಲದ ಅಧಿವೇಶನ ಸಂದರ್ಭ ಇಡೀ ಸರ್ಕಾರವೇ ಬೆಳಗಾವಿಯಲ್ಲಿತ್ತು. ಆಗ ಜಿಲ್ಲೆಯ ಶಾಸಕರ ಸಭೆ ಕರೆಯಲಿಲ್ಲ. ಇದನ್ನು ಗಮನಿಸಿದರೆ ಅವರಿಗೆ ಬೆಳಗಾವಿ ಜಿಲ್ಲೆ ವಿಭಜನೆಗೆ ವಿರೋಧ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಆರೋಪಿಸಿದರು.

‘ಶೀಘ್ರ ಜಿಲ್ಲೆಯ ಎಲ್ಲ ಶಾಸಕರು ಸಭೆ ಕರೆದು ಚರ್ಚಿಸಿ, ಬೆಳಗಾವಿ ಜಿಲ್ಲಾ ವಿಭಜನೆ ಕುರಿತಾಗಿ ನಿರ್ಧಾರ ತೆಗೆದುಕೊಳ್ಳಬೇಕು. ಈ ವಿಷಯದಲ್ಲಿ ರಾಜಕೀಯ ಮಾಡಬಾರದು’ ಎಂದರು.

ADVERTISEMENT

ಪ್ರೊ.ಅರ್ಜುನ ಪಂಗಣ್ಣವರ, ಸಂಜೀವ ಪೂಜಾರಿ, ಸದಾಕತ ಅಲಿ ಮಕಾನದಾರ, ಪ್ರವೀಣ ನಾಯಿಕ ಇದ್ದರು.