ADVERTISEMENT

ಅಥಣಿ: ರಸ್ತೆ ಪಕ್ಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2021, 22:19 IST
Last Updated 23 ಸೆಪ್ಟೆಂಬರ್ 2021, 22:19 IST

ಅಥಣಿ (ಬೆಳಗಾವಿ ಜಿಲ್ಲೆ): ಹಲ್ಯಾಳ ಗ್ರಾಮದ ಸಮೀಪ ರಸ್ತೆ ಪಕ್ಕ ಪ್ರಜ್ಞಾಹೀನವಾಗಿದ್ದ ಎರಡು ವರ್ಷದ ಬಾಲಕಿ ಬೆತ್ತಲೆ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದ್ದು ಗ್ರಾಮಸ್ಥರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಖಾಸಗಿ ಅಂಗವೂ ಸೇರಿದಂತೆ ಬಾಲಕಿಯ ಮೈ ತುಂಬ ಸಿಗರೇಟಿನಿಂದ ಸುಟ್ಟ ಗಾಯಗಳು ಆಗಿವೆ. ಬಾಲಕಿಯ ಗುರುತು ಪತ್ತೆಯಾಗಿಲ್ಲ.

ಡಿಎಸ್ಪಿ ಎಸ್. ಗಿರೀಶ, ಸಿಪಿಐ ಶಂಕರ ಗೌಡ ಬಸನಗೌಡರ, ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.