
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಕಳೆದ ವರ್ಷ ಡಿಸೆಂಬರ್ 10ರಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಲಿಂಗಾಯತ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿ, ದೌರ್ಜನ್ಯ ಎಸಗಿದ ರಾಜ್ಯ ಸರ್ಕಾರದ ನಡೆ ಖಂಡಿಸಿ ಈ ವರ್ಷ ಡಿಸೆಂಬರ್ 10ರಂದು ‘ಲಿಂಗಾಯತರ ಮೇಲಿನ ದೌರ್ಜನ್ಯ ದಿನ’ವೆಂದು ಕಪ್ಪು ಬಟ್ಟೆ ಕಟ್ಟಿಕೊಂಡು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
‘ಅಂದು ಬೆಳಿಗ್ಗೆ 10ಕ್ಕೆ ಬೆಳಗಾವಿಯ ಗಾಂಧಿಭವನದಿಂದ ಸುವರ್ಣ ವಿಧಾನಸೌಧದವರೆಗೆ ಕೈ ಮತ್ತು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು. ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಪುನಃ ಒತ್ತಾಯಿಸಲಾಗುವುದು’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.