ADVERTISEMENT

ಮೂಲಸೌಲಭ್ಯ: ಅತ್ತಿವಾಡ ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 13:00 IST
Last Updated 15 ಅಕ್ಟೋಬರ್ 2019, 13:00 IST
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅತ್ತಿವಾಡ ಗ್ರಾಮಸ್ಥರು ಕಲುಷಿತ ನೀರನ್ನು ಬಾಟಲಿಯಲ್ಲಿ ತಂದು ಪ್ರದರ್ಶಿಸಿದರು
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅತ್ತಿವಾಡ ಗ್ರಾಮಸ್ಥರು ಕಲುಷಿತ ನೀರನ್ನು ಬಾಟಲಿಯಲ್ಲಿ ತಂದು ಪ್ರದರ್ಶಿಸಿದರು   

ಬೆಳಗಾವಿ: ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ–ಮಹಾರಾಷ್ಟ್ರ ಗಡಿಯಲ್ಲಿರುವ ಅತ್ತಿವಾಡ ಗ್ರಾಮಸ್ಥರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಗ್ರಾಮದಲ್ಲಿ 3ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಕೃಷಿಕರು ಹಾಗೂ ಕೃಷಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶುದ್ಧ ಕುಡಿಯುವ ನೀರಿನ ಸೌಲಭ್ಯವಿಲ್ಲದೇ, ಹಲವು ರೋಗ–ರುಜಿನಗಳಿಗೆ ಒಳಗಾಗುತ್ತಿದ್ದಾರೆ’ ಎಂದು ನೇತೃತ್ವ ವಹಿಸಿದ್ದ ವಕೀಲ ಎನ್.ಆರ್. ಲಾತೂರ್ ತಿಳಿಸಿದರು.

‘ಗ್ರಾಮಕ್ಕೆ ಸಾರಿಗೆ ಬಸ್‌ಗಳಿಲ್ಲ. ರಸ್ತೆ ಸರಿ ಇಲ್ಲದಿರುವುದರಿಂದ ಖಾಸಗಿ ವಾಹನಗಳೂ ಬರುವುದಿಲ್ಲ. ಇದರಿಂದಾಗಿ ಶಿಕ್ಷಕರು ಸಕಾಲಕ್ಕೆ ಶಾಲೆಗೆ ಬರುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಿ, ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಗ್ರಾಮದ ಕಾರ್ಮಿಕರ ಸಂಘದ ಅಧ್ಯಕ್ಷ ಜ್ಯೋತಿಬಾ ಮಾರುತಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.