ADVERTISEMENT

ಬೆಳಗಾವಿ: ವಿವಿಧ ಬೇಡಿಕೆ, ಆಟೊರಿಕ್ಷಾ ಚಾಲಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:00 IST
Last Updated 29 ಸೆಪ್ಟೆಂಬರ್ 2020, 16:00 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘದವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘದವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು   

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೊರಿಕ್ಷಾ ಚಾಲಕರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದಾಗಿ, ಕೆಲಸವಿಲ್ಲದೆ ಆರ್ಥಿಕವಾಗಿ ತೊಂದರೆ ಅನುಭವಿಸಿರುವ ನಮಗೆ ಸರ್ಕಾರ ನೆರವಾಗಬೇಕು. ಅಸಂಘಟಿತ ಕಾರ್ಮಿಕರ ಭದ್ರತಾ ಮಂಡಳಿಯಲ್ಲಿ ಆಟೊರಿಕ್ಷಾ ಚಾಲಕರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು. ಈ ಭದ್ರತಾ ಮಂಡಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು. 15 ವರ್ಷಗಳ ಹಳೆಯ ಆಟೊರಿಕ್ಷಾಗಳ ಪರವಾನಗಿ ನವೀಕರಣ ಮತ್ತು ಪಾಸಿಂಗ್ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು. ಚಾಲಕರಿಗೆ ಕಡ್ಡಾಯವಾಗಿ ಆಟೊ ಕಾಲೊನಿ ನಿರ್ಮಿಸಿಕೊಡಬೇಕು’ ಎಂದು ಆಗ್ರಹಿಸಿದರು.

‘ಆಟೊ ರಿಕ್ಷಾ ಚಾಲಕರ ಮಕ್ಕಳಿಗೆ 1ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ವಿದ್ಯಾರ್ಥಿವೇತನ ನೀಡಬೇಕು. ಎಲ್ಲ ಚಾಲಕರಿಗೂ ಇಎಸ್‌ಐ ನೀಡಬೇಕು. ಚಾಲಕರು ಅಪಘಾತದಲ್ಲಿ ನಿಧನರಾದರೆ ಅಥವಾ ಅಂಗವಿಕಲರಾದರೆ ಕುಟುಂಬದವರಿಗೆ ₹ 10 ಲಕ್ಷ ಪರಿಹಾರ ಕೊಡಬೇಕು. ಅಂಗವಿಕಲರಿಗೆ ಪ್ರತಿ ತಿಂಗಳು ₹ 5ಸಾವಿರ ಮಾಸಾಶನ ನೀಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಆಟೊರಿಕ್ಷಾಗಳ ನಿಲ್ದಾಣಗಳನ್ನು ನಿರ್ಮಿಸಿಕೊಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.