ADVERTISEMENT

ಹಿಂದೂ ಧರ್ಮ ಜಾಗೃತಿ, ಸಂಸ್ಕೃತಿ ಪಾಲನೆ ಅವಶ್ಯಕ: ಪ್ರಭುನೀಲಕಂಠ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 3:00 IST
Last Updated 26 ಸೆಪ್ಟೆಂಬರ್ 2025, 3:00 IST
ಬೈಲಹೊಂಗಲದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ ತಾಲ್ಲೂಕು ಘಟಕದಿಂದ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಗ್ರಾಮದೇವಿ ದೇವಸ್ಥಾನದಿಂದ ಆರಂಭವಾದ ಮೊದಲ ದಿನದ ದುರ್ಗಾ ಮಾತಾ ದೌಡ್ ಗೆ ಪ್ರಭುನೀಲಕಂಠ ಸ್ವಾಮೀಜಿ ಪೂಜೆ ಸಲ್ಲಿಸಿ ಮಂಗಳವಾರ ಚಾಲೆನ ನೀಡಿದರು
ಬೈಲಹೊಂಗಲದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ ತಾಲ್ಲೂಕು ಘಟಕದಿಂದ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಗ್ರಾಮದೇವಿ ದೇವಸ್ಥಾನದಿಂದ ಆರಂಭವಾದ ಮೊದಲ ದಿನದ ದುರ್ಗಾ ಮಾತಾ ದೌಡ್ ಗೆ ಪ್ರಭುನೀಲಕಂಠ ಸ್ವಾಮೀಜಿ ಪೂಜೆ ಸಲ್ಲಿಸಿ ಮಂಗಳವಾರ ಚಾಲೆನ ನೀಡಿದರು   

ಬೈಲಹೊಂಗಲ: ‘ಭಾರತೀಯ ಪರಂಪರೆಯಲ್ಲಿ ಹಲವಾರು ಧರ್ಮಗಳಿವೆ, ಆಚರಣೆಗಳಿವೆ. ಅವುಗಳೆಲ್ಲುವುದಕ್ಕಿಂತ ಹೆಚ್ಚು ಸನಾತನ ಹಿಂದೂ ಧರ್ಮದ ಪರಂಪರೆ, ಆಚರಣೆಗೆ ಹೆಚ್ಚಿನ ಪ್ರಾಶಸ್ತ್ಯ, ಪ್ರಾಮುಖ್ಯತೆ ನೀಡಲಾಗಿದೆ. ಅದರ ಸಂಸ್ಕೃತಿ, ಆಚರಣೆಗಳನ್ನು ಮಕ್ಕಳಿಗೆ ಕಲಿಸಿಕೊಟ್ಟು ಸಶಕ್ತ ಭಾರತ ನಿರ್ಮಾಣ ಮಾಡಬೇಕು’ ಎಂದು ಮೂರುಸಾವಿರಮಠದ ಪೀಠಾಧಿಪತಿ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ವಿಶ್ವಹಿಂದು ಪರಿಷದ್, ಬಜರಂಗದಳ ತಾಲ್ಲೂಕು ಘಟಕದಿಂದ ನವರಾತ್ರಿ ದಸರಾ ಮಹೋತ್ಸವ ಅಂಗವಾಗಿ ಮಂಗಳವಾರ ಆರಂಭವಾದ ಶ್ರೀದುರ್ಗಾ ಮಾತಾ ದೌಡ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನವರಾತ್ರಿ ದಸರಾ ಮಹೋತ್ಸವದ 9 ದಿನಗಳಲ್ಲಿ ನವದುರ್ಗೆಯರ ಆರಾಧನೆ ಮಾಡಬೇಕು. ಪ್ರತಿಯೊಬ್ಬರು ಯಾವುದೇ ಜಾತಿ, ಧರ್ಮ, ಪಕ್ಷ ಬಿಟ್ಟು ಶ್ರದ್ಧೆ, ಭಕ್ತಿಯಿಂದ ದುರ್ಗಾ ದೌಡ್‍ದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದರು.

ADVERTISEMENT

ಶಾಸಕ ಮಹಾಂತೇಶ ಕೌಜಲಗಿ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ, ವಿಶ್ವಹಿಂದೂ ಪರಿಷದ್ ಜಿಲ್ಲಾ ಘಟಕ ಅಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ, ತಾಲ್ಲೂಕು ಘಟಕ ಅಧ್ಯಕ್ಷ ಕಾಶಿನಾಥ ಬಿರಾದಾರ, ಪುರಸಭೆ ಸದಸ್ಯರಾದ ಬಾಬು ಕುಡಸೋಮಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.